;
top of page

ಮಾರಕಾಸ್ತ್ರಗಳಿಂದ ಕೊಚ್ಚಿ ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ

  • 7 days ago
  • 1 min read

ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದ ಬಳಿ ಸರ್ಕಾರಿ ಶಾಲಾ ಶಿಕ್ಷಕಿ ಜ್ಯೋತಿ ಕಪಾಳೆ ಹಿರೇಮಠ (57) ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಹಂತಕರು ಸಾಕ್ಷ್ಯ ನಾಶಪಡಿಸಲು ಪೆಟ್ರೋಲ್ ಸುರಿದು ಶವವನ್ನು ಸುಟ್ಟುಹಾಕಿದ್ದು, ಈ ಕೃತ್ಯವು ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ. ಮೃತರು ಬೀದರ್ ಜಿಲ್ಲೆಯ ವಂದರಖೇಡ ಗ್ರಾಮದ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಕಲಬುರಗಿಯಿಂದ ಬೀದರ್‌ಗೆ ತೆರಳುವ ಮಾರ್ಗಮಧ್ಯೆ ಈ ಅಮಾನುಷ ಘಟನೆ ನಡೆದಿದೆ. ಆರಂಭದಲ್ಲಿ ಅಪರಿಚಿತ ಮಹಿಳೆಯ ಕೊಲೆ ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು, ನಂತರ ತನಿಖೆಯ ವೇಳೆ ಮೃತರ ಗುರುತು ಪತ್ತೆಯಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಂತಕರ ಪತ್ತೆಗಾಗಿ ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page