;
top of page

ತಮಿಳುನಾಡು ಬಿಜೆಪಿಗೆ ಬಿಗ್ ಶಾಕ್: ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಕೆ. ಅಣ್ಣಾಮಲೈ ರಾಜೀನಾಮೆ

  • Jun 2
  • 1 min read

ತಮಿಳುನಾಡು ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿ ನಾಯಕ ಕೆ. ಅಣ್ಣಾಮಲೈ ಮಂಗಳವಾರ (ಜೂನ್ 2) ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ಅವರು ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು.

ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ನೈನಾರ್ ನಾಗೇಂದ್ರನ್ ಅವರನ್ನು ನೇಮಿಸಿದಾಗಿನಿಂದಲೂ ಅಣ್ಣಾಮಲೈ ಅಸಮಾಧಾನಗೊಂಡಿದ್ದರು. ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಹಾಗೂ ಬಿ.ಎಲ್. ಸಂತೋಷ್ ಅವರೊಂದಿಗಿನ ಸಭೆಯಲ್ಲಿ, ಪಕ್ಷ ತೊರೆದು ಸ್ವಂತವಾಗಿ ಹೊಸ ಆಂದೋಲನ ರೂಪಿಸಿಕೊಳ್ಳುವ ಇಚ್ಛೆಯನ್ನು ಅವರು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ನಟ-ರಾಜಕಾರಣಿ ವಿಜಯ್ ರಾಜಕೀಯ ಪ್ರವೇಶಿಸಿ ಮುಖ್ಯಮಂತ್ರಿಯಾದ ಬಳಿಕ ತಮಿಳುನಾಡು ರಾಜಕೀಯದಲ್ಲಿ ದ್ರಾವಿಡ ಯುಗ ಮುಗಿದಿದ್ದು, ಭಾಷಾ ರಾಜಕಾರಣ ಬದಲಾಗಿದೆ. ಇಂತಹ ಸನ್ನಿವೇಶದಲ್ಲಿ ಅಣ್ಣಾಮಲೈ ಅವರ ಈ ನಿರ್ಗಮನವು ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದ್ದು, ಪ್ರಮುಖ ಬದಲಾವಣೆಯ ದಿಕ್ಸೂಚಿಯಾಗಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page