ತೊಕ್ಕೊಟ್ಟು ಆರಿಫ್ ಕೊಲೆ ಪ್ರಕರಣ: ತನಿಖೆ ಈಗ ಸಿಸಿಬಿ ವಶಕ್ಕೆ

ತೊಕ್ಕೊಟ್ಟಿನ 'ಟಾಬ್ಲೆಟ್ ಆರಿಫ್' ಕೊಲೆ ಪ್ರಕರಣದ ತನಿಖೆಯನ್ನು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಸಿಸಿಬಿ ಎಸಿಪಿ ತಂಡಕ್ಕೆ ಹಸ್ತಾಂತರಿಸಿದ್ದಾರೆ. ಈ ಕೃತ್ಯದಲ್ಲಿ ಆರು ಮಂದಿ ಆರೋಪಿಗಳಿರುವುದು ದೃಢಪಟ್ಟಿದ್ದು, ಅವರು ನಿರಂತರವಾಗಿ ಸ್ಥಳ ಬದಲಾಯಿಸುತ್ತಿರುವುದು ಪೊಲೀಸರಿಗೆ ಸವಾಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಸಿಸಿಬಿ ತಂಡ ಈಗ ಕಾರ್ಯಾಚರಣೆ ಚುರುಕುಗೊಳಿಸಿದೆ.

ಕೊಲೆಗೆ ಸಂಚು ರೂಪಿಸಿದ ಹಾಗೂ ಆರೋಪಿಗಳಿಗೆ ಆಶ್ರಯ ನೀಡಿದ ಶಂಕಿತರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಅಪರಾಧಿಗಳಿಗೆ ಸಹಾಯ ಮಾಡುವವರು ಬಿಎನ್‌ಎಸ್ ಸೆಕ್ಷನ್ 249(ಎ) ಅಡಿಯಲ್ಲಿ ಕಠಿಣ ಶಿಕ್ಷೆಗೆ ಗುರಿಯಾಗಲಿದ್ದಾರೆ ಎಂದು ಕಮಿಷನರ್ ಎಚ್ಚರಿಸಿದ್ದಾರೆ. ಶುಕ್ರವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿಯ ತೊಕ್ಕೊಟ್ಟು ಫ್ಲೈಓವರ್ ಮೇಲೆ ರೌಡಿಶೀಟರ್ ಆರಿಫ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು.







Comments