ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ: ಬಂಡಾಯ ಬಣದ ತೀರ್ಮಾನ

ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ಬಂಡಾಯ ನಾಯಕರು ವಜಾಗೊಳಿಸಿದ್ದಾರೆ. ಇದರೊಂದಿಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರನ್ನೂ ಪಕ್ಷದಿಂದ ಅಮಾನತುಗೊಳಿಸಲಾಗಿದೆ.
ಕೋಲ್ಕತ್ತಾದ ನ್ಯೂಟೌನ್‌ನ ಪಂಚತಾರಾ ಹೋಟೆಲ್‌ನಲ್ಲಿ ನಡೆದ ಬಂಡಾಯ ಬಣದ ವಿಶೇಷ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರುತಬ್ರತಾ ಬ್ಯಾನರ್ಜಿ ನೇತೃತ್ವದ ಈ ಶಿಬಿರವು, ಮಾಜಿ ಸಚಿವ ಅರೂಪ್ ರಾಯ್ ಅವರನ್ನು ಟಿಎಂಸಿಯ ಹೊಸ ಅಖಿಲ ಭಾರತ ಅಧ್ಯಕ್ಷರನ್ನಾಗಿ ಘೋಷಿಸಿದೆ.
ಅಭಿಷೇಕ್ ಬ್ಯಾನರ್ಜಿ ಅವರ ಕಾರ್ಯವೈಖರಿ ವಿರುದ್ಧ ತೀವ್ರ ಅಸಮಾಧಾನಗೊಂಡಿದ್ದ ಬಂಡಾಯ ನಾಯಕರು, ಅವರನ್ನು ಪಕ್ಷದಿಂದ ತಕ್ಷಣವೇ ಅಮಾನತುಗೊಳಿಸುವ ನಿರ್ಣಯಕ್ಕೆ ಸರ್ವಾನುಮತದ ಒಪ್ಪಿಗೆ ಸೂಚಿಸಿದ್ದಾರೆ.







Comments