ರಾಜ್ಯಾದ್ಯಂತ ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ರಾಜ್ಯಾದ್ಯಂತ ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗುತ್ತಿದ್ದು, ಒಟ್ಟು 2,871 ಕೇಂದ್ರಗಳಲ್ಲಿ 9,02,899 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ದಕ್ಷಿಣ ಕನ್ನಡದಲ್ಲಿ 29,397 ಹಾಗೂ ಉಡುಪಿಯಲ್ಲಿ 14,151 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಪರೀಕ್ಷಾ ಮಂಡಳಿಯು ಸುಸೂತ್ರ ನಿರ್ವಹಣೆಗೆ ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.

ಪರೀಕ್ಷಾ ಅಕ್ರಮಗಳನ್ನು ತಡೆಯಲು ಎಲ್ಲಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಣಾವಲು ಅಳವಡಿಸಲಾಗಿದ್ದು, ಹೆಚ್ಚಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷೆ ಎದುರಿಸಲು ಪೂರಕ ವಾತಾವರಣ ನಿರ್ಮಿಸಲಾಗಿದ್ದು, ಲೋಪದೋಷಗಳಿಲ್ಲದಂತೆ ಪರೀಕ್ಷೆ ನಡೆಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.







Comments