ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ಜಾತ್ರೋತ್ಸವ ಪೂರ್ವಭಾವಿ ಸಭೆ

ಸುಳ್ಯ ಸೀಮೆಯ ಪ್ರಸಿದ್ಧ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವವು ಏಪ್ರಿಲ್ 13 ರಿಂದ 20 ರವರೆಗೆ ಸಂಭ್ರಮದಿಂದ ನಡೆಯಲಿದೆ. ಈ ಹಿನ್ನೆಲೆಯಲ್ಲಿ ದೇವಳದ ಅಕ್ಷಯ ಮಂದಿರದಲ್ಲಿ ಮಾರ್ಚ್ 19 ರಂದು ಜಾತ್ರೋತ್ಸವದ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಅತ್ಯಂತ ಯಶಸ್ವಿಯಾಗಿ ಜರುಗಿತು.


ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಕೊಳಲುಮೂಲೆ ಅಧ್ಯಕ್ಷತೆ ವಹಿಸಿ ಆಮಂತ್ರಣ ಬಿಡುಗಡೆ ಮಾಡಿದರು. ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು. ಏಪ್ರಿಲ್ 1 ರಂದು ಗೊನೆ ಮುಹೂರ್ತ ನಡೆಯಲಿದ್ದು, ಸೀಮೆಯ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಮಿತಿಯು ಪ್ರಕಟಣೆಯಲ್ಲಿ ವಿನಂತಿಸಿದೆ.







Comments