;
top of page

ನಾಳೆ ಡಿ.ಕೆ. ಶಿವಕುಮಾರ್ ಪ್ರಮಾಣವಚನ: ಮಧ್ಯಾಹ್ನದಿಂದ ಸರ್ಕಾರಿ ನೌಕರರಿಗೆ ರಜೆ, ಸಂಚಾರ ಮಾರ್ಪಾಡು

  • Jun 2
  • 1 min read

ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭವು ನಾಳೆ ಲೋಕಭವನದಲ್ಲಿ ನಡೆಯಲಿದ್ದು, ಸುತ್ತಮುತ್ತಲ ಪ್ರದೇಶಗಳಲ್ಲಿ ಭದ್ರತೆ ಹಾಗೂ ಸಂಚಾರ ದಟ್ಟಣೆ ನಿಯಂತ್ರಣಕ್ಕಾಗಿ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ನಾಳೆ ಮಧ್ಯಾಹ್ನದಿಂದ ರಜೆ ಘೋಷಿಸಲಾಗಿದೆ.

ಲೋಕಭವನದ ಕಾರ್ಯಕ್ರಮಕ್ಕೆ ಕೇವಲ ಆಹ್ವಾನಿತರಿಗೆ ಮಾತ್ರ ಪ್ರವೇಶವಿದ್ದು, ಸಾರ್ವಜನಿಕರಿಗೆ ಅವಕಾಶವಿರುವುದಿಲ್ಲ. ಸಾರ್ವಜನಿಕರ ಅನುಕೂಲಕ್ಕಾಗಿ ನಾಳೆ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಲೋಕಭವನದ ಸುತ್ತಮುತ್ತಲಿನ ಪ್ರಮುಖ ರಸ್ತೆಗಳ ಸಂಚಾರ ವ್ಯವಸ್ಥೆಯಲ್ಲಿ ಬೆಂಗಳೂರು ಪೊಲೀಸರು ಮಹತ್ವದ ಮಾರ್ಪಾಡುಗಳನ್ನು ಮಾಡಿದ್ದಾರೆ.

ಕಬ್ಬನ್ ರಸ್ತೆಯ ಬಿಆರ್‌ವಿ ಜಂಕ್ಷನ್‌ನಿಂದ ಸಿಟಿಒ ಜಂಕ್ಷನ್‌ವರೆಗೆ ಹಾಗೂ ಸಿಟಿಒ ವೃತ್ತದಿಂದ ಲೋಕಭವನದವರೆಗೆ ಅಧಿಕೃತ ವಾಹನಗಳನ್ನು ಹೊರತುಪಡಿಸಿ ಉಳಿದೆಲ್ಲಾ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಇದರೊಂದಿಗೆ ನಾಳೆ ಮಧ್ಯಾಹ್ನ 12 ರಿಂದ ರಾತ್ರಿ 10 ಗಂಟೆಯವರೆಗೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page