;
top of page

ಚಲಿಸುವ ರೈಲಿನಲ್ಲೇ ಗರ್ಭಿಣಿಗೆ ಹೆರಿಗೆ: ತಾಯಿ-ಮಗು ಸುರಕ್ಷಿತ

  • Jun 18
  • 1 min read

ಅಸ್ಸಾಂನಲ್ಲಿ ಚಲಿಸುತ್ತಿದ್ದ ಅವಧ್ ಅಸ್ಸಾಂ ಎಕ್ಸ್‌ಪ್ರೆಸ್ ರೈಲಿನಲ್ಲಿ ಜೂನ್ 14ರಂದು ಗರ್ಭಿಣಿಯೊಬ್ಬರಿಗೆ ಏಕಾಏಕಿ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದೆ. ಈ ವೇಳೆ ರೈಲಿನಲ್ಲಿದ್ದ ಸಹ ಪ್ರಯಾಣಿಕ ನರ್ಸ್ ಹಾಗೂ ರೈಲ್ವೆ ಸಿಬ್ಬಂದಿಯ ಸಮಯೋಚಿತ ನೆರವು ಮತ್ತು ಧೈರ್ಯದಿಂದ ಮಹಿಳೆ ಸುರಕ್ಷಿತವಾಗಿ ಮಗುವಿಗೆ ಜನ್ಮ ನೀಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ರೈಲ್ವೆ ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗಿ ರಂಗಿಯಾ ನಿಲ್ದಾಣದಲ್ಲಿ ವೈದ್ಯಕೀಯ ತಂಡವನ್ನು ಸಜ್ಜುಗೊಳಿಸಿದರು. ರೈಲು ನಿಲ್ದಾಣಕ್ಕೆ ತಲುಪುತ್ತಿದ್ದಂತೆ ಡಾ. ಶರತ್ ಚಂದ್ರ ನೇತೃತ್ವದ ತಂಡವು ತಾಯಿ ಮತ್ತು ಅಕಾಲಿಕವಾಗಿ ಜನಿಸಿದ ಮಗುವನ್ನು ತಪಾಸಣೆ ನಡೆಸಿ, ಹೆಚ್ಚಿನ ನಿಗಾಕ್ಕಾಗಿ ಗುವಾಹಟಿ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಿದೆ.

ಪ್ರಸ್ತುತ ತಾಯಿ-ಮಗು ಇಬ್ಬರೂ ಆರೋಗ್ಯವಾಗಿದ್ದು, ತುರ್ತು ಸಂದರ್ಭದಲ್ಲಿ ದೇವತೆಯಂತೆ ನೆರವಾದ ನರ್ಸ್ ಕೃಷ್ಣಮ್ಮ ಗೋಲ್ಡ್ ಸ್ಮಿತ್ ಅವರ ವೃತ್ತಿಪರ ಸೇವೆಯನ್ನು ಈಶಾನ್ಯ ಗಡಿನಾಡು ರೈಲ್ವೆ ಮುಕ್ತಕಂಠದಿಂದ ಶ್ಲಾಘಿಸಿದೆ. ವ್ಯವಸ್ಥಿತ ಸಮನ್ವಯದಿಂದಾಗಿ ದೊಡ್ಡ ಗಂಡಾಂತರವೊಂದು ತಪ್ಪಿದಂತಾಗಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page