ತುಳುನಾಡಿನ ಬಹುಕಾಲದ ಕನಸಿಗೆ ಮುದ್ರೆ! ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ — ಮಂಗಳೂರು ಕ್ಯಾಬಿನೆಟ್‌ನಲ್ಲಿ ಮಹತ್ವದ ಘೋಷಣೆ

ಮಂಗಳೂರು: ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಕುರಿತು ಘೋಷಣೆ ಮಾಡಿದ್ದಾರೆ.
ಕರಾವಳಿ ಭಾಗದ ಜನರ ಬಹುಕಾಲದ ಬೇಡಿಕೆಗೆ ಸ್ಪಂದಿಸಿರುವ ಸರ್ಕಾರ, ತುಳು ಭಾಷೆಯ ಸಂರಕ್ಷಣೆ, ಅಭಿವೃದ್ಧಿ ಹಾಗೂ ಅಧಿಕೃತ ಬಳಕೆಗೆ ಆದ್ಯತೆ ನೀಡುವುದಾಗಿ ತಿಳಿಸಿದೆ. ಇದಕ್ಕಾಗಿ ಅಗತ್ಯ ಕಾನೂನು ಮತ್ತು ಆಡಳಿತಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.







Comments