ಉಡುಪಿ: ಹೆತ್ತ ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಮಗ!

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬೈಕಾಡಿ ಗ್ರಾಮದಲ್ಲಿ ಅತ್ಯಂತ ಭೀಕರ ಹಾಗೂ ಆಘಾತಕಾರಿ ಘಟನೆಯೊಂದು ನಡೆದಿದೆ. ಬೈಕಾಡಿಯ ಗಾಂಧಿನಗರ ನಿವಾಸಿಗಳಾದ ಮೆಹಬೂಬ್ ಹಾಗೂ ಸಂಶದ್ ಬೇಗಂ ದಂಪತಿಯನ್ನು ಅವರ ಸ್ವಂತ ಮಗನೇ ಸುತ್ತಿಗೆಯಿಂದ ಕ್ರೂರವಾಗಿ ಹೊಡೆದು ಕೊಲೆ ಮಾಡಿದ್ದಾನೆ.

ಕೊಲೆ ಮಾಡಿದ ಆರೋಪಿಯನ್ನು 31 ವರ್ಷದ ಶಾಹಿದ್ ಅಲಿ ಎಂದು ಗುರುತಿಸಲಾಗಿದೆ. ಮನೆಯಲ್ಲಿದ್ದ ಸುತ್ತಿಗೆಯಿಂದ ಹೆತ್ತವರ ತಲೆಗೆ ತೀವ್ರವಾಗಿ ಹಲ್ಲೆ ನಡೆಸಿದ್ದರಿಂದ, ತಂದೆ ಮತ್ತು ತಾಯಿ ಇಬ್ಬರೂ ಸ್ಥಳದಲ್ಲೇ ರಕ್ತದ ಮಡುವಿನಲ್ಲಿ ಕೊನೆಯುಸಿರೆಳೆದಿದ್ದಾರೆ.
ಘಟನೆ ತಿಳಿದ ತಕ್ಷಣ ಬ್ರಹ್ಮಾವರ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಶಾಹಿದ್ ಅಲಿಯನ್ನು ಪೊಲೀಸರು ಈಗಾಗಲೇ ವಶಕ್ಕೆ ಪಡೆದಿದ್ದು, ಕೊಲೆಗೆ ನಿಖರ ಕಾರಣ ಏನೆಂಬುದು ಸುದೀರ್ಘ ತನಿಖೆಯ ನಂತರವೇ ತಿಳಿದುಬರಬೇಕಿದೆ.







Comments