ಉಡುಪಿ ಅಬಕಾರಿ ಡಿಸಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ: ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ

ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ. ಅವರ ನಿವಾಸ ಸೇರಿದಂತೆ ರಾಜ್ಯದ 15 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಮಂಗಳೂರು ವಿಭಾಗದ ಎಸ್ಪಿ ದಿನೇಶ್ ಕುಮಾರ್ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ, ಅಕ್ರಮವಾಗಿ ಗಳಿಸಿದ ಎನ್ನಲಾದ ಬರೋಬ್ಬರಿ 6.90 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಗಳನ್ನು ಪತ್ತೆಹಚ್ಚಲಾಗಿದೆ. ಇದರಲ್ಲಿ 11 ನಿವೇಶನಗಳು ಮತ್ತು 31 ಎಕರೆ ಕೃಷಿ ಭೂಮಿ ಸೇರಿವೆ.

ಕೇವಲ ಸ್ಥಿರಾಸ್ತಿಯಷ್ಟೇ ಅಲ್ಲದೆ, 2.66 ಕೋಟಿ ರೂಪಾಯಿ ಮೌಲ್ಯದ ಚರಾಸ್ತಿಗಳೂ ಲೋಕಾಯುಕ್ತರ ಕೈಗೆ ಸಿಕ್ಕಿವೆ. ದಾಳಿಯ ವೇಳೆ ಒಂದೂವರೆ ಕೋಟಿಗೂ ಅಧಿಕ ನಗದು ಹಾಗೂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ತೀವ್ರ ತನಿಖೆ ಮುಂದುವರಿಸಿದ್ದು, ಭ್ರಷ್ಟಾಚಾರದ ಮತ್ತಷ್ಟು ಆಯಾಮಗಳು ಹೊರಬರುವ ಸಾಧ್ಯತೆಯಿದೆ.







Comments