;
top of page

ಆ. 4ರಂದು ಭಾರೀ ಮಳೆ ಸಾಧ್ಯತೆ: ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

Aug 3
1 min read

ಉಡುಪಿ: ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಆಗಸ್ಟ್ 4 (ಮಂಗಳವಾರ) ರಜೆ ಘೋಷಿಸಲಾಗಿದೆ.

ಉಡುಪಿ ಜಿಲ್ಲಾಧಿಕಾರಿ ಸ್ವರೂಪ್ ಟಿ.ಕೆ. ಅವರು ಈ ಕುರಿತು ಪ್ರಕಟಣೆ ಹೊರಡಿಸಿದ್ದು, ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇದೀಗ ಕರ್ನಾಟಕದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಮೂರು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಆಗಸ್ಟ್ 7ರವರೆಗೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ವಿಶೇಷವಾಗಿ ಕರಾವಳಿ ಕರ್ನಾಟಕ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಆದ್ದರಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page