ಕುಂದಾಪುರ ಶೂಟೌಟ್ ಬಳಿಕ ಉಡುಪಿಯಲ್ಲಿ ಮತ್ತೊಂದು ರಕ್ತಪಾತಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಗುಂಡಿನ ದಾಳಿಗೆ ಬಲಿ

ಉಡುಪಿ: ಕುಂದಾಪುರದಲ್ಲಿ ನಡೆದ ಶೂಟೌಟ್ ಘಟನೆ ಮಾಸುವ ಮುನ್ನವೇ, ಉಡುಪಿ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಗುಂಡಿನ ದಾಳಿ ಸಂಭವಿಸಿದ್ದು, ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ (ಪ್ರಿನ್ಸ್) ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಈ ಘಟನೆಯಿಂದ ಕರಾವಳಿ ಭಾಗವೇ ಬೆಚ್ಚಿಬಿದ್ದಿದೆ.

ಸ್ಥಳೀಯವಾಗಿ ಪ್ರಭಾವಿ ನಾಯಕನಾಗಿದ್ದ ಡೇವಿಡ್ ಡಿಸೋಜಾ ಅವರು ಮುದರಂಗಡಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರಾಗಿದ್ದು, ಸಾರ್ವಜನಿಕ ಸೇವೆಯಲ್ಲಿ ಸಕ್ರಿಯರಾಗಿದ್ದರು. ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಶೂಟೌಟ್‌ಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ವೈಯಕ್ತಿಕ ದ್ವೇಷ, ರಾಜಕೀಯ ವೈಷಮ್ಯ ಅಥವಾ ಇತರ ಹಿನ್ನೆಲೆಗಳ ಕುರಿತು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ. ಈ ಘಟನೆಯಿಂದ ಕರಾವಳಿ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.







Comments