;
top of page

ವೃದ್ಧ ತಾಯಿಗೆ ಆಸರೆಯಾಗಬೇಕಿದ್ದ ಮಗನೇ ರಸ್ತೆಯಲ್ಲಿ ಬಿಟ್ಟು ಹೋದ! ಉಡುಪಿಯಲ್ಲಿ ಅಮಾನವೀಯ ಘಟನೆ

Sep 28
1 min read

ಉಡುಪಿ: ಬ್ರಹ್ಮಾವರದ ಎಸ್‌.ಎಂ.ಎಸ್. ಆಂಗ್ಲ ಮಾಧ್ಯಮ ಶಾಲೆ ಬಳಿ 70 ವರ್ಷದ ವೃದ್ಧೆಯೊಬ್ಬರು ದಿಕ್ಕು ತೋಚದೆ ನಿಂತಿದ್ದ ಘಟನೆ ನಡೆದಿದೆ. ಶಾಲಾ ಬಸ್ ಚಾಲಕ ರಾಮನಾಥ್ ಶೆಣೈ ಅವರು ವೃದ್ಧೆಯನ್ನು ಗಮನಿಸಿ ಸಮಾಜ ಸೇವಾ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ತೆರಳಿದ ನಿತ್ಯಾನಂದ ಒಳಕಾಡು ಅವರು 112 ತುರ್ತು ಪೊಲೀಸ್ ಸಹಾಯವಾಣಿ ಸಿಬ್ಬಂದಿಯ ನೆರವಿನಿಂದ ವೃದ್ಧೆಯನ್ನು ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ವೃದ್ಧೆ ತನ್ನ ಹೆಸರು ಸರಸ್ವತಿ (70) ಎಂದು ಹಾಗೂ ತಮಿಳುನಾಡಿನ ತಿರುವಳ್ಳುವೂರು ನಿವಾಸಿ ಎಂದು ತಿಳಿಸಿದ್ದಾರೆ. ತನ್ನ ಮಗ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿದ್ದಾನೆ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಮಹಿಳಾ ಪೊಲೀಸ್ ಠಾಣೆ ಹಾಗೂ ಹಿರಿಯ ನಾಗರಿಕರ ಸಹಾಯವಾಣಿಗೆ ಮಾಹಿತಿ ನೀಡಲಾಗಿದ್ದು, ವೃದ್ಧೆಯ ಕುಟುಂಬದವರ ಪತ್ತೆ ಹಾಗೂ ಮುಂದಿನ ಕ್ರಮದ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

​

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page