ಉಜಿರೆ: ಮನೆಯಲ್ಲೇ ನೇಣು ಬಿಗಿದುಕೊಂಡು ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ
- Apr 16
- 1 min read

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಪಿಯುಸಿ ವಿದ್ಯಾರ್ಥಿಯೊಬ್ಬ ತನ್ನ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ನಡೆದಿದೆ. ಟಿ.ಬಿ. ಕ್ರಾಸ್ ನಿವಾಸಿ ಮಹಮ್ಮದ್ ಅಯಾನ್ (17) ಮೃತಪಟ್ಟ ದುರ್ದೈವಿ. ಈತ ಸ್ಥಳೀಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.

ಬುಧವಾರ ತನ್ನ ಅಪಾರ್ಟ್‌ಮೆಂಟ್‌ನ ಕೊಠಡಿಯ ಫ್ಯಾನ್‌ಗೆ ಅಯಾನ್ ನೇಣು ಹಾಕಿಕೊಂಡಿದ್ದು, ಮನೆಯವರು ಗಮನಿಸಿದಾಗ ವಿಷಯ ಬೆಳಕಿಗೆ ಬಂದಿದೆ. ವಿದ್ಯಾರ್ಥಿಯ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.







Comments