;
top of page

ಉಳ್ಳಾಲ: ವಿದ್ಯುತ್ ಆಘಾತದಿಂದ ಮೆಸ್ಕಾಂ ಲೈನ್‌ಮೆನ್ ದುರಂತ ಸಾವು

Aug 3
1 min read

ಉಳ್ಳಾಲ ತಾಲೂಕಿನ ಉಚ್ಚಿಲ ನಯಾಪಟ್ಟಣದಲ್ಲಿ ಇಂದು ಬೆಳಿಗ್ಗೆ ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಆಘಾತಕ್ಕೊಳಗಾಗಿ ಮೆಸ್ಕಾಂ ಲೈನ್‌ಮೆನ್ ಮೃತಪಟ್ಟಿದ್ದಾರೆ. ಅಂಬಿಕಾರೋಡ್ ಪಿಲಾರು ನಿವಾಸಿ ಶೇಖ್ ಝಮೀರ್ (49) ಮೃತಪಟ್ಟ ದೌರ್ಭಾಗ್ಯಕರ ವ್ಯಕ್ತಿಯಾಗಿದ್ದಾರೆ.

ಟ್ರಾನ್ಸ್‌ಫಾರ್ಮರ್‌ನಲ್ಲಿದ್ದ ದೋಷ ಸರಿಪಡಿಸಲು ಬಂದಿದ್ದ ಝಮೀರ್, ಜಿಒಎಸ್ (ಗ್ರೂಪ್ ಆಪರೇಟೆಡ್ ಸ್ವಿಚ್) ಆಫ್ ಆಗಿದೆಯೆಂದು ಭಾವಿಸಿ ಟಿಸಿ ಏರಿದ್ದರು. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಕೆಳಗೆ ಬಿದ್ದ ಅವರನ್ನು ಆಸ್ಪತ್ರೆಗೆ ಒಯ್ಯುವಾಗ ದಾರಿ ಮಧ್ಯೆ ಕೊನೆಯುಸಿರೆಳೆದರು.

ಮೃತ ಶೇಖ್ ಝಮೀರ್ ಅವರು ಪತ್ನಿ ಹಾಗೂ ಓರ್ವ ಹೆಣ್ಣುಮಗಳನ್ನು ಅಗಲಿದ್ದಾರೆ. ಈ ಘಟನೆಯು ಸ್ಥಳೀಯವಾಗಿ ತೀವ್ರ ಶೋಕ ವಾತಾವರಣವನ್ನು ನಿರ್ಮಿಸಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page