;
top of page

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು-ಆಟೋ ಡಿಕ್ಕಿ: ಐವರು ಶಾಲಾ ಮಕ್ಕಳಿಗೆ ಗಾಯ

Mar 10
1 min read

ರಾಷ್ಟ್ರೀಯ ಹೆದ್ದಾರಿ 75 ರ ಸರ್ವೀಸ್ ರಸ್ತೆಯಲ್ಲಿ ಸೋಮವಾರ ಸಂಜೆ ಕಾರು ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದೆ. ಉಪ್ಪಿನಂಗಡಿ ಸರ್ಕಾರಿ ಶಾಲೆಯ ಐವರು ವಿದ್ಯಾರ್ಥಿಗಳು ಹಾಗೂ ಆಟೋ ಚಾಲಕ ಕಲಂದರ್ ಶಾಫಿ (46) ಗಾಯಗೊಂಡಿದ್ದಾರೆ. ಶಾಲೆಯಿಂದ ಮನೆಗೆ ಮರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಗಾಯಗೊಂಡ ವಿದ್ಯಾರ್ಥಿಗಳಾದ ಮಹಮ್ಮದ್ ಜಾಝೀಬ್, ಇರ್ಷಾದ್, ನೂರ್ ಮಹಮದ್, ರಾಝೀಲ್ ಮತ್ತು ಪುಟ್ಟ ಬಾಲಕಿ ಸಜ್ಮಾ ಅವರನ್ನು ತಕ್ಷಣ ಸ್ಥಳೀಯ ಸೂರ್ಯ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ನೆಕ್ಕಿಲಾಡಿ ನಿವಾಸಿಗಳಾದ ಈ ಮಕ್ಕಳು ಪ್ರತಿದಿನದಂತೆ ಆಟೋದಲ್ಲಿ ಪ್ರಯಾಣಿಸುತ್ತಿದ್ದರು.

ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಉಪ್ಪಿನಂಗಡಿ ಮತ್ತು ಪುತ್ತೂರು ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸರ್ವೀಸ್ ರಸ್ತೆಯಲ್ಲಿ ವೇಗವಾಗಿ ಬಂದ ಕಾರು ಆಟೋಗೆ ಡಿಕ್ಕಿ ಹೊಡೆದಿದ್ದೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page