;
top of page

ಉಪ್ಪಿನಂಗಡಿ: ಬೈಕ್ ತಡೆದು ಚೂರಿ ತೋರಿಸಿ ನಗದು, ಮೊಬೈಲ್ ದರೋಡೆ; ಮೂವರ ವಿರುದ್ಧ ಪ್ರಕರಣ ದಾಖಲು

Oct 19
1 min read

ಉಪ್ಪಿನಂಗಡಿ-ಗುರುವಾಯನಕೆರೆ ರಸ್ತೆಯಲ್ಲಿ ಶುಕ್ರವಾರ ಬೈಕ್ ಅಡ್ಡಗಟ್ಟಿ ಚೂರಿ ತೋರಿಸಿ ಬೆದರಿಸಿ, ಇಬ್ಬರಿಂದ ಎರಡು ಮೊಬೈಲ್ ಹಾಗೂ ನಗದು ದರೋಡೆ ಮಾಡಿರುವ ಘಟನೆ ನಡೆದಿದೆ.

ಕಡಬ ತಾಲ್ಲೂಕಿನ ಕೋನಾಜೆ ನಿವಾಸಿ ಮಿಥಿಲೇಶ್ ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ತನ್ವೀಶ್ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಮಿಥಿಲೇಶ್ ಹಾಗೂ ಅವರ ಅತ್ತೆ ಮಗಾಧೇವಿ ಬೈಕ್‌ನಲ್ಲಿ ಬರುತ್ತಿದ್ದಾಗ ಆರೋಪಿಗಳು ಕಾರಿನಲ್ಲಿ ಬಂದು ದರೋಡೆ ಎಸಗಿದ್ದಾರೆ.

"ನನ್ನ ಹಣ ಎಲ್ಲಿ, ಯಾಕೆ ಕೊಟ್ಟಿಲ್ಲ" ಎಂದು ಪ್ರಶ್ನಿಸಿ ಚೂರಿ ತೋರಿಸಿ ಬೆದರಿಸಿ, ಜೇಬಿನಲ್ಲಿದ್ದ ಒಟ್ಟು 5 ಸಾವಿರ ರೂ. ಮೌಲ್ಯದ ಎರಡು ಮೊಬೈಲ್ ಹಾಗೂ ಒಟ್ಟು 7,200 ರೂ. ನಗದನ್ನು ಬಲವಂತವಾಗಿ ಕಸಿದುಕೊಂಡು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

​

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page