ಉಪ್ಪಿನಂಗಡಿ: ಅಕ್ರಮವಾಗಿ ಸಂಗ್ರಹಿಸಿದ್ದ 4,175 ಲೀಟರ್ ಡೀಸೆಲ್ ವಶ
- Mar 11
- 1 min read

ಉಪ್ಪಿನಂಗಡಿ ಸಮೀಪದ ಕಣಿಯೂರು ಗ್ರಾಮದಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ ಸುಮಾರು 4,175 ಲೀಟರ್ ಡೀಸೆಲ್ ಅನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಡಿವೈಎಸ್‌ಪಿ ರೋಹಿಣಿ ಸಿ.ಕೆ. ಅವರಿಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ನಡೆದಿದೆ.

ಸ್ಥಳೀಯ ನಿವಾಸಿ ಜಗದೀಶ್ ಎಂಬಾತನ ಮನೆಯ ಶೆಡ್‌ನಲ್ಲಿ 20 ಬ್ಯಾರೆಲ್ ಹಾಗೂ 5 ಕ್ಯಾನ್‌ಗಳಲ್ಲಿ ಇಂಧನ ಪತ್ತೆಯಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ಸುಮಾರು ರೂ. 3,50,000 ಎಂದು ಅಂದಾಜಿಸಲಾಗಿದ್ದು, ಯಾವುದೇ ಪರವಾನಗಿ ಇಲ್ಲದೆ ಇದನ್ನು ಸಂಗ್ರಹಿಸಲಾಗಿತ್ತು.
ಈ ಸಂಬಂಧ ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಹಾಗೂ ಅಗತ್ಯ ವಸ್ತುಗಳ ಕಾಯ್ದೆಯಡಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.







Comments