ವಯನಾಡ್‌ನಲ್ಲಿ ಭಾರಿ ಭೂಕುಸಿತ: ಹಲವರು ಸಿಲುಕಿರುವ ಶಂಕೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿ ಸಮೀಪದ ಕಲ್ಲಾಡಿಯಲ್ಲಿ ಮಂಗಳವಾರ ಭಾರಿ ಭೂಕುಸಿತ ಸಂಭವಿಸಿದೆ. ಸುರಂಗ ಮಾರ್ಗದ ಕಾಮಗಾರಿ ನಡೆಯುತ್ತಿದ್ದ ಮೀನಾಕ್ಷಿ ಸೇತುವೆ ಬಳಿ ಈ ದುರಂತ ಸಂಭವಿಸಿದ್ದು, ಅವಶೇಷಗಳ ಅಡಿಯಲ್ಲಿ ಕೆಲವರು ಸಿಲುಕಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಲ್ಲಿನ ತಾತ್ಕಾಲಿಕ ಕ್ಯಾಂಪ್‌ಗಳಲ್ಲಿದ್ದ ಮೂವರು ಕಾರ್ಮಿಕರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಘಟನೆಯಿಂದಾಗಿ ಕಾರ್ಮಿಕರ ವಾಹನಗಳು ಹಾಗೂ ಸಮೀಪದ ಕೆಲವು ಮನೆಗಳಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ. ಕಲ್ಪೆಟ್ಟಾದಿಂದ ಅಗ್ನಿಶಾಮಕ ದಳವು ತಕ್ಷಣವೇ ಸ್ಥಳಕ್ಕೆ ಧಾವಿಸಿದೆ.
ಪ್ರಸ್ತುತ ಪೊಲೀಸರು ಮತ್ತು ಎನ್‌ಡಿಆರ್‌ಎಫ್ ಸಿಬ್ಬಂದಿ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸಚಿವ ಟಿ. ಸಿದ್ದೀಕ್ ಹಾಗೂ ಜಿಲ್ಲಾಧಿಕಾರಿಯವರು ಸ್ಥಳದಲ್ಲೇ ಮೊಕ್ಕಾಂ ಹೂಡಿ, ಕಾರ್ಯಾಚರಣೆಯ ಸಮನ್ವಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.







Comments