ವಿಧಾನಮಂಡಲ ವಿಶೇಷ ಅಧಿವೇಶನ ಆರಂಭ: ಬರ ಪರಿಸ್ಥಿತಿ, ಕಸ್ತೂರಿರಂಗನ್ ವರದಿ ಕುರಿತು ತೀವ್ರ ಚರ್ಚೆ

ಬೆಳಗಾವಿ/ಬೆಂಗಳೂರು: ರಾಜ್ಯದಲ್ಲಿ ಎದುರಾಗಿರುವ ಭೀಕರ ಬರ ಪರಿಸ್ಥಿತಿ ಹಾಗೂ ಕಸ್ತೂರಿರಂಗನ್ ವರದಿ ಕರಡು ಅಧಿಸೂಚನೆ ಕುರಿತು ಚರ್ಚಿಸಲು ಇಂದಿನಿಂದ ಮೂರು ದಿನಗಳ ಕಾಲ ವಿಧಾನಮಂಡಲದ ವಿಶೇಷ ಅಧಿವೇಶನ ಆರಂಭವಾಗಲಿದೆ. ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳಲಿದ್ದು, ಆಡಳಿತ ಹಾಗೂ ವಿಪಕ್ಷಗಳ ನಡುವೆ ಭಾರಿ ಜಿದ್ದಾಜಿದ್ದಿ ನಡೆಯುವ ಸಾಧ್ಯತೆಯಿದೆ.
ಕಳೆದ ಅಧಿವೇಶನದಲ್ಲಿ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಡೆಸಿದ ನಿರಂತರ ಧರಣಿಯಿಂದಾಗಿ ಕಲಾಪ ಮೊಟಕುಗೊಂಡಿತ್ತು. ಹೀಗಾಗಿ, ಈ ವಿಶೇಷ ಅಧಿವೇಶನದಲ್ಲಿ ಬೆಳೆಹಾನಿ, ಕುಡಿಯುವ ನೀರು, ವಿದ್ಯುತ್ ಅಭಾವ ಹಾಗೂ ಜಾನುವಾರುಗಳ ಮೇವಿನ ಅಭಾವದ ಬಗ್ಗೆ ಗಂಭೀರ ಚರ್ಚೆ ನಡೆಯಲಿದೆ. ಜೊತೆಗೆ ಕಸ್ತೂರಿರಂಗನ್ ವರದಿಯಿಂದ ಮಲೆನಾಡು ಮತ್ತು ಕರಾವಳಿ ಭಾಗದ ಜನರ ಮೇಲಾಗುವ ಪರಿಣಾಮಗಳ ಬಗ್ಗೆಯೂ ಸುದೀರ್ಘವಾಗಿ ಚರ್ಚಿಸಲಾಗುತ್ತಿದ್ದು, ರೈತರ ಸಾಲಮನ್ನಾಗಾಗಿ ವಿಪಕ್ಷಗಳು ಪಟ್ಟು ಹಿಡಿಯುವ ನಿರೀಕ್ಷೆಯಿದೆ.







Comments