ವಿಟ್ಲದಲ್ಲಿ ಅಮಲು ಪದಾರ್ಥ ಸೇವನೆ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ – ಯುವಕ ಬಂಧನ
- May 6
- 1 min read

ನಾಲ್ಕು ಮಾರ್ಗ ಜಂಕ್ಷನ್‌ನಲ್ಲಿ ತಪಾಸಣೆ ವೇಳೆ ಘಟನೆ | ವೈದ್ಯಕೀಯ ವರದಿಯಲ್ಲಿ ಡ್ರಗ್ಸ್ ಸೇವನೆ ದೃಢ
ವಿಟ್ಲದ ಜನಸಂಚಾರ ಜೋರಾಗಿರುವ ನಾಲ್ಕು ಮಾರ್ಗ ಜಂಕ್ಷನ್‌ನಲ್ಲಿ ಭಾನುವಾರ ಮಧ್ಯಾಹ್ನ ನಡೆದ ಒಂದು ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಸಾಮಾನ್ಯ ವಾಹನ ತಪಾಸಣೆ ನಡೆಯುತ್ತಿದ್ದ ವೇಳೆ, ಅಮಲು ಪದಾರ್ಥ ಸೇವಿಸಿದ್ದ ಯುವಕನೊಬ್ಬ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದೆ.
ಬಂಟ್ವಾಳ ತಾಲೂಕಿನ ಕೊಳ್ನಾಡು ನಿವಾಸಿ ಮಹಮ್ಮದ್ ಅಸ್ಬೀರ್ (26) ಬಂಧಿತ ಆರೋಪಿ. ವಿಟ್ಲ ಪೊಲೀಸ್ ಉಪನಿರೀಕ್ಷಕ ಬಿ.ಎಸ್. ನಾಯಕ್ ಅವರ ನೇತೃತ್ವದಲ್ಲಿ ತಪಾಸಣೆ ನಡೆಯುತ್ತಿದ್ದಾಗ, ಹೆಲ್ಮೆಟ್ ಧರಿಸದೆ ಸ್ಕೂಟರ್‌ನಲ್ಲಿ ಬಂದ ಅಸ್ಬೀರ್ ಅವರನ್ನು ಪೊಲೀಸರು ತಡೆದರು.
ಈ ವೇಳೆ ಆತನ ವರ್ತನೆ ಅಸಹಜವಾಗಿದ್ದು, ಪೊಲೀಸರೊಂದಿಗೆ ಅಸಭ್ಯವಾಗಿ ಮಾತನಾಡಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದನು. ಇದರಿಂದ ಅನುಮಾನಗೊಂಡ ಪೊಲೀಸರು ತೀವ್ರ ವಿಚಾರಣೆ ನಡೆಸಿದಾಗ, ಆತ ಮಾದಕ ವಸ್ತು ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾನೆ.
ತಕ್ಷಣ ವೈದ್ಯಕೀಯ ತಪಾಸಣೆ ನಡೆಸಲಾಗಿದ್ದು, ಮಾದಕ ದ್ರವ್ಯ ಸೇವನೆ ಮಾಡಿದಿರುವುದು ವರದಿಯಲ್ಲಿ ದೃಢಪಟ್ಟಿದೆ.
ಈ ಹಿನ್ನೆಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆ (NDPS Act), ಭಾರತೀಯ ನ್ಯಾಯ ಸಂಹಿತೆ (BNS) ಹಾಗೂ ಮೋಟಾರು ವಾಹನ ಕಾಯ್ದೆ (IMV Act) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ತನಿಖೆ ಮುಂದುವರೆಸಿದ್ದಾರೆ.







Comments