;
top of page

ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮೂವರು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ

Sep 8
1 min read

ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ವಿಟ್ಲ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಸಂತ್ರಸ್ತ ಅಪ್ರಾಪ್ತ ಬಾಲಕ ನೀಡಿದ ದೂರಿನಂತೆ, 2026ರ ಫೆಬ್ರವರಿಯಿಂದ ಆಗಸ್ಟ್ ತಿಂಗಳ ಅವಧಿಯಲ್ಲಿ ಲೈಂಗಿಕ ದೌರ್ಜನ್ಯ ನಡೆದಿರುವುದಾಗಿ ಆರೋಪಿಸಲಾಗಿದೆ. ಈ ಕುರಿತು ಸೆಪ್ಟೆಂಬರ್ 4, 2026ರಂದು ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.

ದೂರಿನ ಆಧಾರದ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 185/2026, 186/2026, 187/2026, 188/2026, 189/2026 ಹಾಗೂ 190/2026ರಂತೆ ಪ್ರಕರಣಗಳನ್ನು ದಾಖಲಿಸಲಾಗಿದ್ದು, ಪೋಕೋ ಕಾಯ್ದೆ–2012ರ ಕಲಂ 4(2), 5(m), 6 ಮತ್ತು 8ರ ಅಡಿಯಲ್ಲಿ ತನಿಖೆ ಕೈಗೊಳ್ಳಲಾಗಿದೆ.

ತನಿಖೆ ಮುಂದುವರಿಸಿದ ಪೊಲೀಸರು ಜವಾದ್, ಶಾಹಿದ್ ಹಾಗೂ ರಿಯಾಝ್ @ ಅಬ್ದುಲ್ ಗಫೂರ್ ಎಂಬವರನ್ನು ವಶಕ್ಕೆ ಪಡೆದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯವು ಮೂವರು ಆರೋಪಿಗಳಿಗೂ ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page