
ವಿಟ್ಲ : ಅಡ್ಯನಡ್ಕದಲ್ಲಿ ಆಕಸ್ಮಿಕ ದುರಂತ: ಕೆರೆಗೆ ಬಿದ್ದು 32 ವರ್ಷದ ವ್ಯಕ್ತಿ ಸಾವು

ವಿಟ್ಲ, ಆ.7: ವಿಟ್ಲ ಸಮೀಪದ ಅಡ್ಯನಡ್ಕ ಗ್ರಾಮದ ಮನಿಮುಂಡ ಪ್ರದೇಶದಲ್ಲಿ ಕಾಲು ಜಾರಿ ಕೆರೆಗೆ ಬಿದ್ದ ಪರಿಣಾಮ ಕೂಲಿ ಕಾರ್ಮಿಕನೋರ್ವ ಮೃತಪಟ್ಟ ದುರ್ಘಟನೆ ನಡೆದಿದೆ.

ಮೃತರನ್ನು ದಿನೇಶ್ ನಾಯ್ಕ (32) ಎಂದು ಗುರುತಿಸಲಾಗಿದೆ. ಅವರು ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದು, ಪತ್ನಿ ಹಾಗೂ ತಂದೆ-ತಾಯಿಯನ್ನು ಅಗಲಿದ್ದಾರೆ.
ಲಭ್ಯವಾದ ಮಾಹಿತಿಯಂತೆ, ದಿನೇಶ್ ಅವರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಘಟನೆಯಿಂದ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.







Comments