ವಿಟ್ಲ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ವಿಟ್ಲ: ಕೇರಳ ಮೂಲದ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನೊಬ್ಬ ಅಪ್ರಾಪ್ತ ಬಾಲಕಿಯೊಂದಿಗೆ ಮೊಬೈಲ್ ಮೂಲಕ ಸಂಪರ್ಕದಲ್ಲಿದ್ದು, ಆಕೆಯನ್ನು ಮನೆಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
2025ರ ಡಿಸೆಂಬರ್ 21ರಂದು ಬಾಲಕಿಯು ಆರೋಪಿತ ಬಾಲಕನ ಮನೆಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. 2026ರ ಸೆಪ್ಟೆಂಬರ್ 8ರಂದು ಬಾಲಕಿಯ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೆಪ್ಟೆಂಬರ್ 9ರಂದು ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ.
ಈ ಕುರಿತು ವಿಟ್ಲ ಠಾಣೆಯಲ್ಲಿ ಶೂನ್ಯ ಎಫ್‌ಐಆರ್ (01/2026) ದಾಖಲಾಗಿದ್ದು, ಪೋಕ್ಸೋ ಕಾಯ್ದೆಯ ವಿವಿಧ ಕಲಂಗಳು ಹಾಗೂ ಬಿಎನ್‌ಎಸ್ ಕಲಂ 64(2)(m) ಅಡಿಯಲ್ಲಿ ದೂರು ಕಾಯ್ದಿರಿಸಲಾಗಿದೆ. ಘಟನೆ ನಡೆದ ಸ್ಥಳದ ಆಧಾರದ ಮೇಲೆ ಪ್ರಕರಣವನ್ನು ಸಂಬಂಧಿಸಿದ ಠಾಣೆಗೆ ವರ್ಗಾಯಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.







Comments