ವಾಲಿಬಾಲ್ ಆಡುವಾಗ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು

ಸುರತ್ಕಲ್ ಸಮೀಪದ ಸೂರಿಂಜೆಯಲ್ಲಿ ಬುಧವಾರ ಸಂಜೆ ಶೋಕದ ವಾತಾವರಣ ಆವರಿಸಿದೆ. ಸ್ನೇಹಿತರೊಂದಿಗೆ ಮೈದಾನದಲ್ಲಿ ವಾಲಿಬಾಲ್ ಆಡುತ್ತಿದ್ದ 10ನೇ ತರಗತಿ ವಿದ್ಯಾರ್ಥಿ ಲಿಖಿತ್ ಅಮೀನ್ (15) ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಈತ ಸ್ಥಳೀಯ ಮಾಧವ ಅಮೀನ್ ಅವರ ಪುತ್ರ.

ಆಟದ ಮಧ್ಯೆ ಕುಸಿದು ಬಿದ್ದ ಬಾಲಕನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ. ಸೂರಿಂಜೆ ಕೋಟೆ ಬೋಳ್ಳಾರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ ಈತನ ಅಕಾಲಿಕ ಸಾವು ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ತೀವ್ರ ದುಃಖ ಸೃಷ್ಟಿಸಿದೆ.







Comments