ಮತದಾರರ ಪಟ್ಟಿ ಪರಿಷ್ಕರಣೆ ಆರಂಭ: ಮನೆ ಮನೆಗೆ ಬರಲಿದ್ದಾರೆ ಚುನಾವಣಾಧಿಕಾರಿಗಳು
- Jun 30
- 1 min read

ಭಾರತದ ಚುನಾವಣಾ ಆಯೋಗವು ರಾಜ್ಯದಲ್ಲಿ ಇಂದಿನಿಂದ ಒಂದು ತಿಂಗಳ ಕಾಲ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯವನ್ನು ಕೈಗೆತ್ತಿಕೊಂಡಿದೆ. ಈಗಾಗಲೇ ಶೇ. 91.61 ರಷ್ಟು ಮ್ಯಾಪಿಂಗ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಬಾಕಿ ಉಳಿದಿರುವ ಮತದಾರರ ಮ್ಯಾಪಿಂಗ್ ಹಾಗೂ ಪರಿಶೀಲನೆಗಾಗಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಓ) ನಿಮ್ಮ ಮನೆ ಮನೆಗೆ ಭೇಟಿ ನೀಡಲಿದ್ದಾರೆ.
ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ಮತದಾರರ ಪೈಕಿ ನಕಲಿ ಹಾಗೂ ಅನರ್ಹ ಮತದಾರರನ್ನು ಪಟ್ಟಿಯಿಂದ ತೆಗೆದುಹಾಕುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ. ಅಧಿಕಾರಿಗಳು ನೀಡುವ ಎಸ್‌ಐಆರ್ ಅರ್ಜಿಯಲ್ಲಿ ಮತದಾರರು ಸರಿಯಾದ ಮಾಹಿತಿ ನೀಡಿ, ಸಹಿ ಮತ್ತು ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಈ ಪ್ರಕ್ರಿಯೆಯಲ್ಲಿ ಭಾಗಿಯಾಗದಿದ್ದರೆ ಮತದಾನದ ಹಕ್ಕಿನಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ.
ಈ ವಿಶೇಷ ಪರಿಷ್ಕರಣೆಯ ಅವಧಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಮೃತಪಟ್ಟವರ ಅಥವಾ ಸ್ಥಳಾಂತರಗೊಂಡವರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗುತ್ತದೆ. ವಿಶೇಷವಾಗಿ ಅಕ್ಟೋಬರ್ 7, 2026 ಕ್ಕೆ 18 ವರ್ಷ ತುಂಬುವ ಯುವ ಮತದಾರರು ಸಹ ಹೊಸದಾಗಿ ಅರ್ಜಿ ಸಲ್ಲಿಸಲು ಚುನಾವಣಾ ಆಯೋಗವು ಸಕಲ ಸಿದ್ಧತೆಗಳೊಂದಿಗೆ ಅವಕಾಶ ಕಲ್ಪಿಸಿದೆ.







Comments