;
top of page

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಹಿಂಸಾಚಾರಕ್ಕೆ ಸುವೇಂಧು ಅಧಿಕಾರಿಯ ಆಪ್ತ ಸಹಾಯಕ ಬಲಿ| ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು

  • May 7
  • 1 min read

ಪಶ್ಚಿಮ ಬಂಗಾಳದಲ್ಲಿ ಮತ್ತೆ ರಾಜಕೀಯ ಹಿಂಸಾಚಾರ ತಲೆದೋರಿದ್ದು, ಪ್ರತಿಪಕ್ಷ ನಾಯಕ ಹಾಗೂ ಬಿಜೆಪಿ ಹಿರಿಯ ಮುಖಂಡ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ.

ಉತ್ತರ 24 ಪರಗಣ ಜಿಲ್ಲೆಯ ಮಾಧ್ಯಮಗ್ರಾಮದಲ್ಲಿ ಬುಧವಾರ ರಾತ್ರಿ ಈ ದಾಳಿ ನಡೆದಿದ್ದು, ಘಟನೆ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಮಾಹಿತಿ ಪ್ರಕಾರ, ರಥ್ ಅವರು ತಮ್ಮ ಸ್ಕಾರ್ಪಿಯೋ ಕಾರಿನಲ್ಲಿ ಕುಳಿತಿದ್ದ ವೇಳೆ ನಾಲ್ಕು ಬೈಕ್‌ಗಳಲ್ಲಿ ಬಂದ ಸುಮಾರು ಎಂಟು ಮಂದಿ ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ.

ಮುಖಕ್ಕೆ ಹೆಲ್ಮೆಟ್ ಧರಿಸಿದ್ದ ಆರೋಪಿಗಳು ನಕಲಿ ನೋಂದಣಿ ಸಂಖ್ಯೆಯ ವಾಹನಗಳನ್ನು ಬಳಸಿದ್ದರೆಂದು ತಿಳಿದುಬಂದಿದೆ. ಪಾಯಿಂಟ್ ಬ್ಲಾಂಕ್ ರೇಂಜ್‌ನಲ್ಲಿ ನಡೆದ ದಾಳಿಯಲ್ಲಿ ರಥ್ ಅವರ ಎದೆ ಹಾಗೂ ಹೊಟ್ಟೆಗೆ ಹಲವು ಗುಂಡೇಟುಗಳು ತಗುಲಿ, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಸುವೇಂದು ಅಧಿಕಾರಿ ಆಸ್ಪತ್ರೆಗೆ ಧಾವಿಸಿದ್ದು, ಇದನ್ನು “ಪೂರ್ವಯೋಜಿತ ತಣ್ಣಗಿನ ರಕ್ತದ ಕೊಲೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಆಪ್ತರನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂದು ಆರೋಪಿಸಿರುವ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಟೀಕಿಸಿದ್ದಾರೆ.

ಈ ಹತ್ಯೆ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುವ ಸಾಧ್ಯತೆ ಇದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page