ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಐತಿಹಾಸಿಕ ಜಯ:ಮನೆ ಕೆಲಸದಾಕೆ ಈಗ ಪಶ್ಚಿಮ ಬಂಗಾಳದ ಶಾಸಕಿ!

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಕಳೆದ 15 ವರ್ಷಗಳಿಂದ ಅಧಿಕಾರದಲ್ಲಿದ್ದ ತೃಣಮೂಲ ಕಾಂಗ್ರೆಸ್ ಭದ್ರಕೋಟೆಯನ್ನು ಛಿದ್ರಗೊಳಿಸಿ ಬಿಜೆಪಿ ಭರ್ಜರಿ ಜಯ ದಾಖಲಿಸಿದೆ. ಒಟ್ಟು 294 ಕ್ಷೇತ್ರಗಳ ಪೈಕಿ ಬಿಜೆಪಿ 206 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ರಾಜ್ಯದಲ್ಲಿ ಮೊದಲ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದೆ.
ಈ ಚುನಾವಣೆಯಲ್ಲಿ ಸಾಮಾನ್ಯ ಜನಸಾಮಾನ್ಯರ ಗೆಲುವು ದೇಶದ ಗಮನ ಸೆಳೆದಿದೆ. ಆಸ್ಗ್ರಾಮ ಕ್ಷೇತ್ರದಿಂದ ಸ್ಫರ್ಧಿಸಿದ್ದ ಮನೆ ಕೆಲಸ ಮಾಡುವ ಮಹಿಳೆ ಕಲಿತಾ ಮಾಝಿ ಅವರು ಭಾರಿ ಮತಗಳ ಅಂತರದಿಂದ ಗೆದ್ದು ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಇವರ ಸರಳತೆ ಮತ್ತು ಸ್ಥಳೀಯ ಜನರೊಂದಿಗಿನ ನಿಕಟ ಸಂಪರ್ಕ ಈ ಗೆಲುವಿಗೆ ಪ್ರಮುಖ ಕಾರಣವಾಗಿದೆ.

ಇದೇ ವೇಳೆ, ಆರ್‌ಜಿ ಕಾರ್ ಮೆಡಿಕಲ್ ಕಾಲೇಜಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಸಂತ್ರಸ್ತೆಯ ತಾಯಿಯೂ ಸಹ ಪಾನಿಹಾಟಿ ಕ್ಷೇತ್ರದಿಂದ ಸ್ಪರ್ಧಿಸಿ ಜಯಭೇರಿ ಬಾರಿಸಿದ್ದಾರೆ. ಈ ಫಲಿತಾಂಶಗಳು ಬಂಗಾಳದ ರಾಜಕೀಯದಲ್ಲಿ ಹೊಸ ಬದಲಾವಣೆಯ ಮುನ್ಸೂಚನೆಯನ್ನು ನೀಡಿದ್ದು, ಸಾಮಾನ್ಯ ಜನರಿಗೆ ರಾಜಕೀಯದಲ್ಲಿ ಸಿಕ್ಕಿರುವ ಈ ಅವಕಾಶ ಚರ್ಚೆಗೆ ಗ್ರಾಸವಾಗಿದೆ.







Comments