;
top of page

ಪತ್ನಿಯ ಶೀಲ ಶಂಕೆ: ಮಚ್ಚಿನಿಂದ ಕೊಚ್ಚಿ ಕೊಂದ ಪತಿ

  • Apr 24
  • 1 min read

ಕೋಲಾರ: ಪತ್ನಿಯ ನಡತೆ ಬಗ್ಗೆ ಅನುಮಾನಗೊಂಡ ಪತಿಯೊಬ್ಬನು ಆಕೆಯನ್ನು ಮಚ್ಚಿನಿಂದ ಹಲ್ಲೆ ಮಾಡಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಚಿನ್ನದ ಗಣಿ ಗ್ರಾಮದ ಬಳಿ ಬುಧವಾರ ನಡೆದಿದೆ.

ಮೃತಳನ್ನು ಈಶ್ವರಮ್ಮ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಆಂಧ್ರಪ್ರದೇಶದ ಪೆದ್ದೂರು ಮೂಲದ ಗೋಪಿನಾಥ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ, ದಂಪತಿ ಬಂಗಾರಪೇಟೆಯಲ್ಲಿರುವ ಸಂಬಂಧಿಕರ ಮನೆಗೆ ಭೇಟಿ ನೀಡಿ ವಾಪಸ್ಸಾಗುತ್ತಿದ್ದ ವೇಳೆ ದಾರಿಯುದ್ದಕ್ಕೂ ಜಗಳ ನಡೆದಿದೆ. ಪತ್ನಿಯ ಶೀಲದ ಬಗ್ಗೆ ಈಗಾಗಲೇ ಶಂಕೆ ಹೊಂದಿದ್ದ ಗೋಪಿನಾಥ ಆಕ್ರೋಶಗೊಂಡು, ಮಚ್ಚಿನಿಂದ ಈಶ್ವರಮ್ಮ ಅವರ ಕೈ ಹಾಗೂ ತಲೆಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ.

ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ಈಶ್ವರಮ್ಮ ಅವರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ನಂತರ ಊರಿಗಾಂ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಆರೋಪಿ ಗೋಪಿನಾಥನನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಊರಿಗಾಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


ಪೂರ್ತಿ ವಿಡಿಯೋ ಇಲ್ಲಿದೆ ನೋಡಿ 👇


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page