;
top of page

ಪರೀಕ್ಷೆಗೆ ಬಂದ ತಾಯಿಗೆ ಆಸರೆಯಾದ ಮಹಿಳಾ ಪೊಲೀಸ್‌; ಮಗುವಿಗೆ ಜೋಗುಳ ಹಾಡಿ ಮಾನವೀಯತೆ ಮೆರೆದ ಸಿಬ್ಬಂದಿ

Aug 3
1 min read

ಬೆಂಗಳೂರು, ಆ. 3: ಪೊಲೀಸ್‌ ಕಾನ್ಸ್ಟೆಬಲ್‌ ನೇಮಕಾತಿ ಪರೀಕ್ಷೆಗೆ ಎಂಟು ತಿಂಗಳ ಮಗುವಿನೊಂದಿಗೆ ಆಗಮಿಸಿದ್ದ ತಾಯಿಯೊಬ್ಬರಿಗೆ ಮಹಿಳಾ ಪೊಲೀಸ್‌ ಸಿಬ್ಬಂದಿ ಮಾನವೀಯತೆ ಮೆರೆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಪರೀಕ್ಷಾ ಕೇಂದ್ರಕ್ಕೆ ಬಂದಿದ್ದ ತಾಯಿ ಪರೀಕ್ಷಾ ಕೊಠಡಿಗೆ ತೆರಳುವ ವೇಳೆ ಮಗು ಅಳಲು ಆರಂಭಿಸಿತು. ಇದರಿಂದ ತಾಯಿ ಆತಂಕಕ್ಕೊಳಗಾದಾಗ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್‌ ಸಿಬ್ಬಂದಿ ಮಗುವನ್ನು ತಮ್ಮ ಆರೈಕೆಯಲ್ಲಿ ನೋಡಿಕೊಳ್ಳುವುದಾಗಿ ಭರವಸೆ ನೀಡಿದರು.

ಬಳಿಕ ಮಗುವಿಗೆ ಜೋಗುಳ ಹಾಡಿ ಸಮಾಧಾನಪಡಿಸಿದ ಅವರು, ಮಗು ಶಾಂತವಾಗುವಂತೆ ನೋಡಿಕೊಂಡರು. ಇದರಿಂದ ತಾಯಿ ಯಾವುದೇ ಆತಂಕವಿಲ್ಲದೆ ಪರೀಕ್ಷೆಯನ್ನು ಪೂರ್ಣಗೊಳಿಸಲು ಸಾಧ್ಯವಾಯಿತು.

ಮಹಿಳಾ ಪೊಲೀಸ್‌ ಸಿಬ್ಬಂದಿಯ ಈ ಮಾನವೀಯ ನಡೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲೂ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಕರ್ತವ್ಯದ ಜೊತೆಗೆ ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿದ ಈ ಘಟನೆ ಅನೇಕರಿಗೆ ಮಾದರಿಯಾಗಿದೆ

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page