ಮಹಿಳೆಯರ ಕ್ಷಮೆ ಕೋರಿದ ಪ್ರಧಾನಿ ಮೋದಿ
- Apr 18
- 1 min read

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮಹಿಳೆಯರಲ್ಲಿ ಕ್ಷಮೆ ಕೇಳಿದ್ದಾರೆ. ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್, ಡಿಎಂಕೆ ಮತ್ತು ಸಮಾಜವಾದಿ ಪಕ್ಷಗಳ ಸ್ವಾರ್ಥ ರಾಜಕಾರಣದಿಂದಾಗಿ ಈ ಮಹತ್ವದ ಮಸೂದೆ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಿರೋಧ ಪಕ್ಷಗಳು ಈ ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಾತೆಯರಿಗೆ ಅಪಮಾನ ಮಾಡಿವೆ ಎಂದು ಮೋದಿ ಬೇಸರ ವ್ಯಕ್ತಪಡಿಸಿದರು.

ಮಸೂದೆ ವಿಫಲವಾದಾಗ ವಿರೋಧ ಪಕ್ಷದ ಸದಸ್ಯರು ಚಪ್ಪಾಳೆ ತಟ್ಟಿ ಸಂಭ್ರಮಿಸಿದ್ದನ್ನು ಟೀಕಿಸಿದ ಪ್ರಧಾನಿ, ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ರಾಜಕೀಯ ಲಾಭಕ್ಕಾಗಿ 'ಭ್ರೂಣ ಹತ್ಯೆ' ಮಾಡಿವೆ ಎಂದು ಗಂಭೀರವಾಗಿ ಆರೋಪಿಸಿದರು. ಇದು ನಾರಿಯರ ಆತ್ಮಸಮ್ಮಾನಕ್ಕೆ ಆದ ದೊಡ್ಡ ಗಾಯವಾಗಿದ್ದು, ಮಹಿಳೆಯರ ಹಕ್ಕನ್ನು ಕಸಿದುಕೊಂಡ ವಿಪಕ್ಷಗಳ ಧೋರಣೆಯನ್ನು ಅವರು ತೀವ್ರವಾಗಿ ಖಂಡಿಸಿದರು.







Comments