;
top of page

ವರ್ಕ್ ಫ್ರಂ ಹೋಂ' ಹೆಸರಲ್ಲಿ ಕೋಟ್ಯಂತರ ವಂಚನೆ: ಇನ್‌ಸ್ಟಾಗ್ರಾಂ ರೀಲ್ಸ್ ಮೂಲಕ ಜನರಿಗೆ ಬಲೆ ಬೀಸಿದ್ದ ದಂಪತಿ ಬಂಧನ

Aug 7
1 min read

ಇನ್‌ಸ್ಟಾಗ್ರಾಂ ರೀಲ್ಸ್ ಮೂಲಕ ‘ವರ್ಕ್ ಫ್ರಂ ಹೋಂ’ ಹೆಸರಿನಲ್ಲಿ ಪ್ಯಾಕಿಂಗ್ ಕೆಲಸ ನೀಡುವುದಾಗಿ ನಂಬಿಸಿ ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ವಂಚನೆ ನಡೆಸಿದ್ದ ಆರೋಪದ ಮೇಲೆ ಕಿರಣ್ ಮತ್ತು ಆತನ ಪತ್ನಿ ಆರತಿ ಅವರನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ‘ಕಾಳಿಕಾ ದೇವಿ ಎಂಟರ್‌ಪ್ರೈಸಸ್’ ಹೆಸರಿನಲ್ಲಿ ನಕಲಿ ಸಂಸ್ಥೆ ಸ್ಥಾಪಿಸಿ, ಮೇಣದ ಬತ್ತಿ, ಅಗರಬತ್ತಿ ಹಾಗೂ ಡ್ರೈ ಫ್ರೂಟ್ಸ್ ಪ್ಯಾಕಿಂಗ್ ಕೆಲಸವನ್ನು ಮನೆಬಾಗಿಲಿಗೆ ನೀಡುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತು ಮಾಡುತ್ತಿದ್ದರು. ಕಚ್ಚಾ ವಸ್ತುಗಳ ಪ್ಯಾಕಿಂಗ್ ಕೆಲಸಕ್ಕಾಗಿ ₹1 ಲಕ್ಷ ಡೆಪಾಸಿಟ್ ಮಾಡಿದರೆ ಪ್ರತಿ ತಿಂಗಳು ₹23 ಸಾವಿರ ಸಂಬಳ ನೀಡುವುದಾಗಿ ಆಮಿಷ ಒಡ್ಡುತ್ತಿದ್ದರು.

ಈ ಮಾತುಗಳನ್ನು ನಂಬಿದ ಹಲವರು ಸಾಲ ಮಾಡಿ ₹2 ಲಕ್ಷದಿಂದ ₹20 ಲಕ್ಷದವರೆಗೆ ಹಣವನ್ನು ಠೇವಣಿ ರೂಪದಲ್ಲಿ ನೀಡಿದ್ದಾರೆ. ಆದರೆ ಹಣ ಪಡೆದ ಬಳಿಕ ಯಾವುದೇ ಕೆಲಸ ನೀಡದೇ, ಠೇವಣಿ ಹಣವನ್ನೂ ಮರುಪಾವತಿಸದೆ ಆರೋಪಿಗಳು ತಲೆಮರೆಸಿಕೊಂಡಿದ್ದರು.

ದೇವನಹಳ್ಳಿ, ದೊಡ್ಡಬಳ್ಳಾಪುರ, ಚಿಕ್ಕಜಾಲ, ಕೋಲಾರ ಸೇರಿದಂತೆ ಹಲವು ಭಾಗಗಳ ನೂರಾರು ಜನರು ಈ ವಂಚನೆಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಕೆಲಸವೂ ಸಿಗದೆ, ಹೂಡಿಕೆ ಮಾಡಿದ ಹಣವೂ ಮರಳದ ಹಿನ್ನೆಲೆಯಲ್ಲಿ ಸಂತ್ರಸ್ತರು ದೇವನಹಳ್ಳಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.

ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿಕೊಂಡ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ತಲೆಮರೆಸಿಕೊಂಡಿದ್ದ ಕಿರಣ್ ಮತ್ತು ಆರತಿ ದಂಪತಿಯನ್ನು ಬಂಧಿಸಿದ್ದಾರೆ.

ಸಾರ್ವಜನಿಕರಿಂದ ಸಂಗ್ರಹಿಸಲಾದ ಕೋಟ್ಯಂತರ ರೂಪಾಯಿ ಹಣದ ಲೇವಾದೇವಿ, ವಂಚನೆ ಜಾಲದ ವ್ಯಾಪ್ತಿ ಹಾಗೂ ಇನ್ನಿತರ ಆರೋಪಿಗಳ ಸಂಪರ್ಕ ಕುರಿತು ಪೊಲೀಸರು ಸದ್ಯ ತೀವ್ರ ತನಿಖೆ ನಡೆಸುತ್ತಿದ್ದಾರೆ. ಇದೇ ರೀತಿಯ ಆಮಿಷದ ಜಾಹೀರಾತುಗಳಿಗೆ ಸಾರ್ವಜನಿಕರು ಮೋಸ ಹೋಗದಂತೆ ಎಚ್ಚರಿಕೆ ವಹಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page