ಕರಾವಳಿಯಲ್ಲಿ ವರುಣನ ಅಬ್ಬರ: ವಿವಿಧ ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ*
- Jul 4
- 1 min read

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಹವಾಮಾನ ಇಲಾಖೆಯು ಕರಾವಳಿ ಭಾಗಕ್ಕೆ 'ಆರೆಂಜ್ ಅಲರ್ಟ್' ಘೋಷಿಸಿದೆ. ಮಳೆಯೊಂದಿಗೆ ಗಂಟೆಗೆ ೩೦-೪೦ ಕಿಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಕಡಲ ತೀರದ ನಿವಾಸಿಗಳು ಮತ್ತು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.
ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಸೇರಿದಂತೆ ಉತ್ತರ ಕರ್ನಾಟಕದ ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, 'ಯೆಲ್ಲೋ ಅಲರ್ಟ್' ಜಾರಿಗೊಳಿಸಲಾಗಿದೆ. ಮುಂಗಾರು ಮಳೆಯ ಅಬ್ಬರ ಜೋರಾಗುತ್ತಿರುವ ಹಿನ್ನೆಲೆಯಲ್ಲಿ ಈ ಭಾಗದ ಜನತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಇನ್ನುಳಿದಂತೆ ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ವಿಜಯಾಪುರ ಸೇರಿದಂತೆ ಬಯಲುಸೀಮೆಯ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲೂ ಬಲವಾದ ಗಾಳಿ ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಇಲಾಖೆ ತಿಳಿಸಿದೆ.







Comments