ರಾಜ್ಯದಲ್ಲಿ ಹೆಚ್ಚಿದ ಬಿಸಿಲ ತಾಪ: ವಿವಿಧ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ತೀವ್ರತೆ ಏರುತ್ತಿದ್ದು, ಹವಾಮಾನ ಇಲಾಖೆಯು ಮುಂದಿನ ನಾಲ್ಕು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಒಣ ಹವೆಯ 'ಯೆಲ್ಲೋ ಅಲರ್ಟ್' ಘೋಷಿಸಿದೆ. ಭಾನುವಾರ ಕಲಬುರಗಿಯಲ್ಲಿ ಗರಿಷ್ಠ 41.6°C ತಾಪಮಾನ ದಾಖಲಾಗುವ ಮೂಲಕ ಅತೀ ಹೆಚ್ಚು ಉಷ್ಣಾಂಶ ಕಂಡುಬಂದಿದೆ.

ಏಪ್ರಿಲ್ 13 ರಿಂದ 16 ರವರೆಗೆ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರು ಹಾಗೂ ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ. ಸಾರ್ವಜನಿಕರು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಈ ಒಣ ಹವೆಯು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಪರಿಣಾಮ ಬೀರಲಿದೆ.







Comments