ಯೋಗೇಶ್ ಗೌಡ ಹತ್ಯೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ

ಧಾರವಾಡದ ಜಿಪಂ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದ 16 ಮಂದಿ ಅಪರಾಧಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಕಠಿಣ ಶಿಕ್ಷೆ ಪ್ರಕಟಿಸುವ ಮೂಲಕ, ಸುಮಾರು ಹತ್ತು ವರ್ಷಗಳ ಸುದೀರ್ಘ ಕಾನೂನು ಹೋರಾಟಕ್ಕೆ ಕೊನೆಗೂ ತಾರ್ಕಿಕ ಅಂತ್ಯ ಸಿಕ್ಕಂತಾಗಿದೆ.

2016ರಲ್ಲಿ ನಡೆದಿದ್ದ ಈ ಬರ್ಬರ ಹತ್ಯೆಯ ಹಿಂದೆ ರಾಜಕೀಯ ದ್ವೇಷವಿರುವುದನ್ನು ಸಿಬಿಐ ತನಿಖೆ ಸಾಬೀತುಪಡಿಸಿತ್ತು. ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ವಾದ-ಪ್ರತಿವಾದ ಆಲಿಸಿ ಈ ಮಹತ್ವದ ತೀರ್ಪು ನೀಡಿದ್ದಾರೆ. ಅಪರಾಧಿಗಳಲ್ಲಿ ಒಬ್ಬ ಪೊಲೀಸ್ ಅಧಿಕಾರಿಯೂ ಸೇರಿರುವುದು ಪ್ರಕರಣದ ಗಂಭೀರತೆಯನ್ನು ಎತ್ತಿ ತೋರಿಸಿದೆ.







Comments