ಯೂಟ್ಯೂಬ್‌ನಲ್ಲಿ ಪ್ರಧಾನಿ ಮೋದಿ ಹೊಸ ದಾಖಲೆ
- 1 day ago
- 1 min read

ಪ್ರಧಾನಿ ನರೇಂದ್ರ ಮೋದಿ ಅವರು ಯೂಟ್ಯೂಬ್‌ನಲ್ಲಿ 30 ಮಿಲಿಯನ್ (3 ಕೋಟಿ) ಸಬ್‌ಸ್ಕ್ರೈಬರ್ಸ್ ಹೊಂದುವ ಮೂಲಕ ಜಾಗತಿಕ ಮಟ್ಟದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಈ ಸಾಧನೆಯೊಂದಿಗೆ ವಿಶ್ವದ ಅತಿ ಹೆಚ್ಚು ಚಂದಾದಾರರನ್ನು ಹೊಂದಿರುವ ರಾಜಕೀಯ ನಾಯಕರ ಪಟ್ಟಿಯಲ್ಲಿ ಮೋದಿ ಅಗ್ರಸ್ಥಾನಕ್ಕೇರಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗಿಂತ ಏಳು ಪಟ್ಟು ಹೆಚ್ಚು ಸಬ್‌ಸ್ಕ್ರೈಬರ್ಸ್ ಹೊಂದಿರುವ ಮೋದಿ, ಡಿಜಿಟಲ್ ಪ್ಲಾಟ್‌ಫಾರ್ಮ್‌ನಲ್ಲಿ ತಮ್ಮ ಪ್ರಭಾವ ಸಾಬೀತುಪಡಿಸಿದ್ದಾರೆ. ಈ ಪಟ್ಟಿಯಲ್ಲಿ ಬ್ರೆಜಿಲ್‌ನ ಮಾಜಿ ಅಧ್ಯಕ್ಷ ಜೈರ್ ಬೋಲ್ಸನಾರೊ ಎರಡನೇ ಸ್ಥಾನದಲ್ಲಿದ್ದರೆ, ಟ್ರಂಪ್ 4 ಮಿಲಿಯನ್ ಚಂದಾದಾರರೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ.






Comments