;
top of page

2023-25 ಉತ್ತೀರ್ಣರಿಗೆ ಗುಡ್ ನ್ಯೂಸ್: ಯುವನಿಧಿ ಯೋಜನೆ ಅರ್ಜಿ ಸಲ್ಲಿಕೆ ಶುರು

  • 10 hours ago
  • 1 min read

ಬೆಂಗಳೂರು: 2023, 2024 ಹಾಗೂ 2025ನೇ ಸಾಲಿನಲ್ಲಿ ಪದವಿ, ಡಿಪ್ಲೋಮಾ ಮತ್ತು ಸ್ನಾತಕೋತ್ತರ ಪದವಿ ಉತ್ತೀರ್ಣರಾದ ನಿರುದ್ಯೋಗಿ ಯುವಕರಿಗಾಗಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.

ಪದವಿ ಪಡೆದಿದ್ದು 6 ತಿಂಗಳಾದರೂ ಸರ್ಕಾರಿ, ಖಾಸಗಿ ಅಥವಾ ಸ್ವಯಂ ಉದ್ಯೋಗ ಹೊಂದಿಲ್ಲದವರು ಹಾಗೂ ಉನ್ನತ ವಿದ್ಯಾಭ್ಯಾಸ ಮುಂದುವರೆಸದೇ ಇರುವ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಾಗಿರುತ್ತಾರೆ. ಆಸಕ್ತರು ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಅಥವಾ ಸೇವಾ ಸಿಂಧು ಪೋರ್ಟಲ್ http://sevasindhugs.karnataka.gov.in� ಮೂಲಕ ಉಚಿತವಾಗಿ ಅರ್ಜಿ ಸಲ್ಲಿಸಬಹುದು.

ಯೋಜನೆಯಡಿ ಪದವೀಧರರು ಹಾಗೂ ಸ್ನಾತಕೋತ್ತರ ಪದವೀಧರರಿಗೆ ಪ್ರತಿ ತಿಂಗಳು ರೂ.3,000 ಮತ್ತು ಡಿಪ್ಲೋಮಾ ಪಡೆದವರಿಗೆ ರೂ.1,500 ನಿರುದ್ಯೋಗ ಭತ್ಯೆ ನೀಡಲಾಗುತ್ತದೆ. ಈ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳವರೆಗೆ ನೀಡಲಾಗುತ್ತದೆ.

ಈಗಾಗಲೇ ಯೋಜನೆಯಲ್ಲಿ ನೋಂದಾಯಿಸಿಕೊಂಡು ಭತ್ಯೆ ಪಡೆಯುತ್ತಿರುವ ಫಲಾನುಭವಿಗಳು ಪ್ರತಿ ತಿಂಗಳೂ ಸ್ವಯಂ ಘೋಷಣೆ (Self Declaration) ಸಲ್ಲಿಸುವುದು ಕಡ್ಡಾಯವಾಗಿದೆ.

ಇದಲ್ಲದೆ, ಫಲಾನುಭವಿಗಳು ಯುವನಿಧಿ ಪ್ಲಸ್ ಅಡಿ ಉಚಿತ ಕೌಶಲ್ಯ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಉಚಿತ ತರಬೇತಿಗೆ ಹೆಸರು ನೋಂದಾಯಿಸಲು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವೆಬ್‌ಸೈಟ್ https://www.kaushalkar.com/app/registration_ver� ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಮೀಪದ ಸೇವಾ ಕೇಂದ್ರವನ್ನು ಸಂಪರ್ಕಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page